ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ

0

ಉಡುಪಿ ಜಿಲ್ಲೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಸಹಾಯಕಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ.

ಬೇಕಾದ ಅರ್ಹತೆಗಳೇನು?
– ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್‌ ಆಗಿರುವುದು ಕಡ್ಡಾಯ. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ಎಂದು ನಿಗದಿಪಡಿಸಲಾಗಿದೆ.
– ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 15.03.2021ಕ್ಕೆ 18 ವರ್ಷ ತುಂಬಿರಬೇಕು. ಆದರೆ 35 ವರ್ಷ ಮೀರಿರಬಾರದು.
– ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
– ಕುಂದಾಪುರ ಯೋಜನೆಯ ಶಿರೂರು ಗ್ರಾಮ ವ್ಯಾಪ್ತಿಯ ಹಡವಿನಕೋಣೆ ಹಾಗೂ ಪುರಸಭಾ ವ್ಯಾಪ್ತಿಯ ಫೆರಿರೋಡ್‌ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನ್ನಡದ ಜೊತೆಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆಯನ್ನು ಬಲ್ಲವರಾಗಿರಬೇಕು.
– ಉಡುಪಿ ಯೋಜನೆಯ ಕಳತ್ತೂರು ಗ್ರಾಮದ ಅಂಗನವಾಡಿ ಸಹಾಯಕಿ ಹುದ್ದೆಗೆ ಆಸುಪಾಸಿನ ಗ್ರಾಮದಿಂದ ಕೂಡ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?
– www.udupi.nic.in ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಬೇಕು.
– ಸಂಬಂಧಪಟ್ಟ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ, ಆನ್‌ಲೈನ್‌ನಲ್ಲೇ ಅರ್ಜಿಯನ್ನು ಸಲ್ಲಿಸಬೇಕು.
– ಅರ್ಜಿ ಸಲ್ಲಿಸಲು 16.04.2021 ಅಂತಿಮ ದಿನವಾಗಿದೆ.

ಯಾವ್ಯಾವ ದಾಖಲೆಗಳು ಬೇಕು?
– ಜನ್ಮ ದಿನಾಂಕದ ದೃಢೀಕರಣಕ್ಕಾಗಿ ಜನನ ಪ್ರಮಾಣ ಪತ್ರ ಅಥವಾ ಜನ್ಮದಿನಾಂಕವಿರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ವ್ಯಾಸಂಗ ದೃಢೀಕರಣ ಪತ್ರ
– ಮೀಸಲಾತಿಗಾಗಿ ಜಾತಿ ಪ್ರಮಾಣ ಪತ್ರ
– ವಿಧವೆಯರಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)
– ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ, ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
– ಅಂಗವಿಕಲತೆ ಶೇ. 60ಕ್ಕಿಂತ ಕಡಿಮೆಯಿದ್ದಲ್ಲಿ, ಅಂಗವಿಕಲ ಪ್ರಮಾಣ ಪತ್ರ (ಅಂಗವಿಕಲ ವೇತನ ದೃಢೀಕರಣವನ್ನು ಪರಿಗಣಿಸುವುದಿಲ್ಲ)
– ವಿಚ್ಛೇದಿತರಾಗಿದ್ದಲ್ಲಿ, ನ್ಯಾಯಾಲಯದಿಂದ ಪಡೆದ ವಿಚ್ಛೇದಿತ ಪ್ರಮಾಣ ಪತ್ರ.
– ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಆಗಿದ್ದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪ್ರಮಾಣ ಪತ್ರ
– ಪರಿತ್ಯಕ್ತೆ ಆಗಿದ್ದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯತ್‌ನಿಂದ ಪಡೆದ ಪ್ರಮಾಣ ಪತ್ರ.
– ಇಲಾಖೆಯ ಸುಧಾರಣಾ ಸಂಸ್ಥೆ ಅಥವಾ ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳಾಗಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
– ಯೋಜನಾ ನಿರಾಶ್ರಿತರಾಗಿದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ.

NOTIFICATION

Apply ONLINE

Leave A Reply

Your email address will not be published.