KMF 2021: ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ ಅಧಿಸೂಚನೆ- 2021.

0

ಹತ್ತನೇಯ ತರಗತಿ, PUC, ITI ಪಾಸ್ ಆದವರಿಗೆ ಇಲ್ಲಿದೆ ಸುವರ್ಣವಕಾಶ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ  ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಉದ್ಯೋಗ ಸುದ್ದಿಯ ವಿವರ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 28 ಮೇ 2021 ರೊಳಗಾಗಿ ಆನ್ ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೋವಿಡ್ ಎರಡನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಲಾಕ್‌ಡೌನ್ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅನಾನುಕೂಲವಾಗಿರುವುದರಿಂದ ಜೂನ್ 29 ರವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 80 ವಿವಿಧ ಹುದ್ದೆಗಳಲ್ಲಿ ಆಸಕ್ತಿಯುಳ್ಳವರು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:

28-04-2021

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-06-2021

ಆನ್‌ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: 30-06 2021 ರ ಸಂಜೆ 5-30 ರವರೆಗೆ.

ಹುದ್ದೆಗಳ ವಿವರ :

ಸಹಾಯಕ ವ್ಯವಸ್ಥಾಪಕರು

ತಾಂತ್ರಿಕ ಅಧಿಕಾರಿ (ಡಿ.ಟಿ)

ತಾಂತ್ರಿಕ ಅಧಿಕಾರಿ (ಪರಿಸರ)

ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್)

ವಿಸ್ತರಣಾಧಿಕಾರಿ ದರ್ಜೆ 3

ಡೈರಿ ಸೂಪರ್ವೈಸರ್ ದರ್ಜೆ 2

ಆಡಳಿತ ಸಹಾಯಕರು ದರ್ಜೆ 2

ಮಾರುಕಟ್ಟೆ ಸಹಾಯಕರು ದರ್ಜೆ 2

ಕೆಮಿಸ್ಟ್ ದರ್ಜೆ 2

ಲೆಕ್ಕ ಸಹಾಯಕರು ದರ್ಜೆ 2

ಕಿರಿಯ ತಾಂತ್ರಿಕರು (ಎಲೆಕ್ನಿಷಿಯನ್, ಎಂ.ಆರ್.ಎ.ಸಿ, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಪಿಟ್ಟರ್, ವೆಲ್ಡರ್, ಬಾಯರ್)

ಒಟ್ಟು ಹುದ್ದೆಗಳು: 76

ಉದ್ಯೋಗ ಸ್ಥಳ: ದಕ್ಷಿಣ ಕನ್ನಡ (ಮಂಗಳೂರು)

ವಿದ್ಯಾರ್ಹತೆ:

ಹುದ್ದೆಗಳಿಗೆ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು SSLC/ PUC / Degree / PG / ITI ಉತ್ತೀರ್ಣರಾಗಿರಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಗಮನಿಸಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳ ವಯೋಮಿತಿ ಹೊಂದಿರಬೇಕು. ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ:

ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕನ್ನಡ ಭಾಷೆಗೆ 50 ಅಂಕಗಳು, ಸಾಮಾನ್ಯ ಇಂಗ್ಲಿಷ್‌ಗೆ ಸಂಬಂಧಿಸಿದಂತೆ 50 ಅಂಕಗಳು, ಸಾಮಾನ್ಯ ಜ್ಞಾನ ಕುರಿತು 25 ಅಂಕಗಳು, ಸಹಕಾರ ವಿಷಯಗಳಿಗೆ 50 ಅಂಕಗಳು, ಭಾರತ ಸಂವಿಧಾನ ಕುರಿತು 25 ಅಂಕಗಳು, ಸಂಸ್ಥೆಯ ಕಾರ್ಯಕ್ಷೇತ್ರ / ಉದ್ದೇಶ / ಕಾರ್ಯಚಟುವಟಿಕೆಗಳ ಕುರಿತು 25 ಅಂಕಗಳಿಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಒಟ್ಟು 200 ಅಂಕಗಳ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹7,500 ಶುಲ್ಕ ಹಾಗೂ ಇತರೆ ಅಭ್ಯರ್ಥಿಗಳಿಗೆ ₹7,800 ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ.

For more information Click here..

WEBSITE

_________

Leave A Reply

Your email address will not be published.