LATEST JOBS| ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ನೇಮಕಾತಿ 2021

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ -25 ಜೂನ್ 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜುಲೈ 2021

ಉದ್ಯೋಗ ಸ್ಥಳ: ಬೀದರ್ ಜಿಲ್ಲೆ

ಒಟ್ಟು ಹುದ್ದೆಗಳು: 113

ಅಂಗನವಾಡಿ ಕಾರ್ಯಕರ್ತೆ – 17 –

ಅಂಗನವಾಡಿ ಸಹಾಯಕಿ – 96

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

 

WEBSITE

______________

 

Leave A Reply

Your email address will not be published.