Village assistant| ವಿಲೇಜ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

0

ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಗಳ ಭರ್ತಿ ಮಾಡಲು ಹೊಸ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಓದಲು ಬರೆಯಲು ಬರುವಂತಹ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನಲ್ಲಿ ಒಟ್ಟು 6 ಗ್ರಾಮ ಸಹಾಯಕರ ಹುದ್ದೆಗಳು ಖಾಲಿ ಇವೆ ಎಂದು ನೇಮಕ ಪ್ರಕಟಣೆ ತಿಳಿಸಿದೆ. ಓದಲು ಬರೆಯಲು ಬರುವಂತಹ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು.

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,

ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ / ಎಸ್ಟಿ / ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ನರಸಿಂಹಾರಾಜಪುರ ತಾಲ್ಲೂಕು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನರಸಿಂಹಾರಾಜಪುರ ತಾಲ್ಲೂಕಿನ ತಹಸೀಲ್ದಾರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವಾಗ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು ವಿದ್ಯಾರ್ಹತೆ ಪ್ರಮಾಣ ಪತ್ರಗಳು.
ಕಾರ್ಯಾನುಭವ ಇದ್ದಲ್ಲಿ ಆಧಾರ ಕಾರ್ಡ್ ಪ್ರಮಾಣ ಪತ್ರಗಳು.
ಇತರೆ ಅಗತ್ಯ ದಾಖಲೆಗಳು

ಅರ್ಜಿ ಸಲ್ಲಿಸಲು ಜೂನ್ 30, 2021 ಕೊನೆ ದಿನವಾಗಿದೆ.

Leave A Reply

Your email address will not be published.