ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹತ್ತನೇಯ ತರಗತಿ ಪಾಸಾದವರಿಗೆ

0

SSLC Pass| ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ (ಪುರುಷ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ : ರೂ.18,600 – 32,600. ಪಿಂಚಣಿ ಸೌಲಭ್ಯ ಇರುತ್ತದೆ.

ಹುದ್ದೆಯ ಹೆಸರು : ಅನುಯಾಯಿ

ಹುದ್ದೆಗಳ ಸಂಖ್ಯೆ : 250

ವಿದ್ಯಾರ್ಹತೆ : 10ನೇ ತರಗತಿ ಪಾಸ್ ಆಗಿರಬೇಕು.

ನೇಮಕಾತಿ ಪ್ರಕ್ರಿಯೆಗಳು : ಸಹಿಷ್ಣುತೆ ಪರೀಕ್ಷೆ ಮತ್ತು
ದೇಹದಾರ್ಡ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ ಇರುತ್ತದೆ.

ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು. ದಿನಾಂಕ 30-08-1991 ರಿಂದ 30-08-2003 ರ ನಡುವೆ ಜನಿಸಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.250. ST / SC / CAT-1 ಅಭ್ಯರ್ಥಿಗಳಿಗೆ ರೂ.100. ಅರ್ಜಿ ಶುಲ್ಕವನ್ನು ಹೆಚ್‌ಡಿಎಫ್‌ಸಿ ಬ್ಯಾಂಕ್ / ಅಂಚೆ ಕಛೇರಿಯಲ್ಲಿ
ಮಾತ್ರ ಪಾವತಿಸತಕ್ಕದ್ದು.

ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-07-2021

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-08-2021

ಆನ್‌ಲೈನ್ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : 01-09-2021

ಅರ್ಜಿ ಸಲ್ಲಿಸಲು ಕೆಳಗೆ ಕ್ಲಿಕ್ ಮಾಡಿ..

WEBSITE

Leave A Reply

Your email address will not be published.